Saturday, November 30, 2013

ಕಾಲವೇ ಚಲಿಸು ಹಿಂದಕ್ಕೆ

ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||

ಮೂಡಬಾಂದಳದೆ ತೇರನ್ನೇರಿದ ಆದಿತ್ಯದೇವನ ಸಂಗದೆ |
ಓಡೆ ಓಟವನ್ನು ಮಾಡೆ ಮಾಟವನ್ನು ಹೂಡೆ ಹೂಟವನ್ನು | ಬಿಡುವಿರದೆ ||

ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಜವ್ವನವ ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮುಪ್ಪು ಬಾರದೊಲರಳಿಸು ||

ಕೞೆದುಹೋಗಿಹ ದಿನಗಳೆಲ್ಲದರ ಆನಂದವ ಕೊಡು ಹಿಂದಕ್ಕೆ |
ಕಾಣುತ್ತಿದ್ದರೂ ಕೈಗೆ ಎಟಕದ ಕನಸನ್ನೂ ಕೊಡು | ಬಿಡುವಿರದೆ ||

ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಬಾಲ್ಯವನ್ನು ಮರಳಿಸು |
ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||

ಪಡುವ ಬಾಂದಳದೆ ತೇಲುತ್ತಿಪ್ಪ ಆ ತುಂಬುತಿಂಗಳ ಚಂದದೆ |
ಸುರಿಯುತ್ತಿದ್ದರೂ ಮೆಯ್ಗೆ ಸೋಕದ ಬೆಳ್ವೊನಲನ್ನು ಕೊಡು | ಬಿಡುವಿರದೆ ||

ಚಲಿಸು ಕಾಲವೇ ಚಲಿಸು ಹಿಂದಕ್ಕೆ | ಮತ್ತೆ ಕಾವ್ಯವನ್ನು ಬರೆಯಿಸು ||
ಭೂತಕಾಲದ ಭವಿತನಿಧಿಗಳ ಕಳೆದುಹೋದ ಕೀಲಿಗೊಂಚಲನ್ನು |

ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ಒಮ್ಮೆ ತಂದುಕೊಡು ದಯೆಯಿರಲಿ ||

 

[soundcloud url="https://api.soundcloud.com/tracks/86460112" width="100%" height="166" iframe="true" /]

2 comments:

  1. ತುಂಬಾ ದಿನಗಳ ನಂತರ ಒಂದು ಸುಂದರ ನವೋದಯ ಕಾವ್ಯ ಓದಿದ ಅನುಭವ ನನಗೆ ಆಯಿತು. ತಮ್ಮ ದಯೆಯಿಂದ ನಾನು ಒಮ್ಮೆ ಬಾಲ್ಯಕ್ಕೆ ಹಿಂದಿರುಗಿ ಬಂದೆ...

    my blog:
    www.badari-poems.blogspot.com

    ReplyDelete
  2. ನಿಮ್ಮ ಪ್ರೀತಿಗಾಗಿ ಕೃತಜ್ಞತೆಗಳು, ಬದರಿನಾಥ ಅವರೇ. ನಿಮ್ಮ ಕವನಗಳೂ ಚೆನ್ನಾಗಿವೆ.

    ReplyDelete

ಜಾತಿಗಣತಿಯ ಆ60 ಪ್ರಶ್ನೆಗಳು

ಜಾತಿಗಣತಿಯ ಆ 60 ಪ್ರಶ್ನೆಗಳು  ಕರ್ನಾಟಕ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಸಾಮಾಜಿಕ-ಶೈಕ್ಷಣಿಕ ಮತ್ತು ಜಾತಿ ಸಮೀಕ್ಷೆ ಪ್ರಸ್ತುತ (ಸೆಪ್ಟೆಂಬರ್ 22 ರಿಂದ ಅಕ್ಟೋಬರ್ ...