Saturday, April 25, 2026

ಕಗ್ಗಮಾಲಿಕೆ – ೪: ನಿರ್ವಚನಾತೀತ

 ಕಗ್ಗಮಾಲಿಕೆ – ೪: ನಿರ್ವಚನಾತೀತ


ಕಗ್ಗ:


ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ|

ಮಹಿಮೆಯಿಂ ಜಗವಾಗಿ ಜೀವವೇಷದಲಿ||

ವಿಹಿಪುದದೊಳ್ಳಿತೆಂಬುದು ನಿಸದವಾದೊಡಾ|

ಗಹನ ತತ್ತ್ವಕ್ಕೆ ಶರಣೊ-ಮಂಕುತಿಮ್ಮ|| 


ವ್ಯಾಖ್ಯಾನ:

ಇದೆಯೋ ಇಲ್ಲವೋ ಎಂದು ತಿಳಿಯಲಾಗದ ವಸ್ತುವೊಂದು ಲೋಕದಲ್ಲಿ ಒಳ್ಳೆಯದನ್ನು ಮಾಡುತ್ತದೆಂದು ನಿನಗೆ ನಿಶ್ಚಯವಾದರೆ ಆ ಗಹನ ತತ್ತ್ವಕ್ಕೆ ಶರಣಾಗು.


ತಾತ್ಪರ್ಯ:

ಎಲ್ಲವನ್ನೂ ಒಳಗೊಂಡ ಎಲ್ಲದರ ಹಿಡಿವಡೆದ ಎಲ್ಲದಕ್ಕೂ ಮಿಗಿಲಾದ ಚೈತನ್ಯವೊಂದಿದೆ. ಅದು ಗಹನವಾದ ತತ್ತ್ವ; ಅದು ವಿವರಣೆಗೆ ನಿಲುಕದಂತಹುದು. ಅದು ನಿನಗೆ ಒಳಿತನ್ನು ಮಾಡುವುದೆಂದು ನಿಶ್ಚಯವಾದರೆ ಚಿಂತನೆಗೆ ನಿಲುಕದ ಆ ಪರಮತ್ತ್ವಕ್ಕೆ ಶರಣಾಗು. ಇದು ಈ ಕಗ್ಗದ ತಾತ್ಪರ್ಯ.


ಇದು ಹಳೆಯ ಮೂಸೆಯಲ್ಲಿ ಎರೆದ ಹೊಸ ಎರಕ. ಮಂತ್ರಪ್ರಾಯವಾದ ಸಾಲುಗಳಿಗಾಗಿ ಸಿದ್ಧಪಡಿಸಿದ ರಾಗಬದ್ಧ ಆಡಿಯೋ ವಿಡಿಯೋ ಇಲ್ಲಿದೆ. ನಿಧಾನಗತಿಯ ರಾಗಾನುರಣನಗಳಲ್ಲಿ ಕಗ್ಗದ ಭಾವ ಗ್ರಾಹ್ಯವಾಗಬಲ್ಲುದು. ಅನುರಣನಗಳಲ್ಲಿ ಕಗ್ಗದ ಕಂಪು ಮೈದೋರುವಂತಾಗಲಿ.


#intellectualsupremacy #DVG #wisdom #philosophy #indicthought #IndicCivilization #bolumbu #kagga #mankutimmanakagga #dvgundappa #dvgundappa✍🏻




ಕೃಷ್ಣಪ್ರಕಾಶ ಬೊಳುಂಬು

No comments:

Post a Comment

ಕಗ್ಗಮಾಲಿಕೆ – ೪: ನಿರ್ವಚನಾತೀತ

 ಕಗ್ಗಮಾಲಿಕೆ – ೪: ನಿರ್ವಚನಾತೀತ ಕಗ್ಗ: ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ| ಮಹಿಮೆಯಿಂ ಜಗವಾಗಿ ಜೀವವೇಷದಲಿ|| ವಿಹಿಪುದದೊಳ್ಳಿತೆಂಬುದು ನಿಸದವಾದೊಡಾ| ಗಹನ ತತ...