Showing posts with label Satire. Show all posts
Showing posts with label Satire. Show all posts

Friday, May 8, 2026

ಸುಡಾಪಿ ಕವಿತೆ

 ಸುಡಾಪಿ ಕವಿತೆ



ಇದೊಂದು ವಿಶಿಷ್ಟ ಮನೋಭಾವದ ಕುರಿತಾದ ಕವಿತೆ. ಸುಡಾಪಿ ಎಂದರೆ ಒಂದು ಮನಸ್ಥಿತಿಯೆಂದು ಬಲ್ಲವರು ಹೇಳಿದ್ದಾರೆ. "ನಮ್ಮ ಮತವೊಂದೇ ಮುಖ್ಯ — ನಮ್ಮ ಪ್ರವಾದಿಯೇ ಅಂತಿಮರು, ನಮ್ಮ ಪುಸ್ತಕದಿಂದ ಮಾತ್ರ ಉದ್ಧಾರ, ನಮ್ಮ ಮತವನ್ನು ಅನುಸರಿಸುವುದರಿಂದ ಮಾತ್ರ ಸ್ವರ್ಗದ ಬಾಗಿಲು ತೆರೆಯುವುದು" ಎಂದು ಎಲ್ಲಾ ಮತಸ್ಥರು ನಂಬುತ್ತಾರೆ. ಇದರಲ್ಲಿ ವಿಶೇಷವಿಲ್ಲ; ಆದರೆ ದೇಶದ ಸುರಕ್ಷತೆಗಿಂತ ದೀನ್ ಮುಖ್ಯ ಎನ್ನುವ ಮನಸ್ಥಿತಿ ಕಳವಳಕಾರಿ. ಈ ಕವಿತೆ ಅಂತಹ ಮನಸ್ಥಿತಿಯನ್ನು ವಿಶ್ಲೇಷಿಸುತ್ತದೆ. 

ಇದೊಂದು ಮತಕೇಂದ್ರಿತ ರಾಜಕೀಯ ಮನೋಭಾವ, ಉಮ್ಮಾ-ಆಧಾರಿತ ಗುರುತು ಮತ್ತು “ನಾನು ಜಿಹಾದಿ ಅಲ್ಲ” ಎಂಬ ನಕಾರಾತ್ಮಕ ಆತ್ಮರಕ್ಷಣೆಯ ವ್ಯಂಗ್ಯರೂಪ. ಇದನ್ನು ಕವಿತೆ ಪ್ರಶ್ನಿಸುವ ಬಗೆ ಇಂತಿದೆ:— "ನೀನು ಜಿಹಾದಿ ಅಲ್ಲವೆಂದರೂ, ಜಿಹಾದೀ ಮನೋವೃತ್ತಿಗೆ ನೆಲೆಯಾದ ಮೌಲ್ಯಗಳನ್ನು ಬೆಂಬಲಿಸುತ್ತೀಯಾ?". ಇದಕ್ಕೆ ದೊರಕಬಲ್ಲ ಉತ್ತರಗಳಲ್ಲಿ ನಾಗರಿಕ ಪ್ರಜ್ಞೆ ಉಳಿದುಕೊಳ್ಳುತ್ತದೆ.

ಆಗ ಅಲ್ಲೊಂದು ತತ್ತ್ವಸಂಘರ್ಷ ಏರ್ಪಡುತ್ತದೆ. ಅದೇನೆಂದರೆ "ಅನ್ಯ ದೇಶದಲ್ಲಿ ನೆಲೆಸಿರುವ ಹಿಂದು ನನಗೆ ಯಾರೂ ಅಲ್ಲ" ಎನ್ನಲಾಗುತ್ತದೆ. ಆದರೆ ಅದೇ ಉಸಿರಿನಲ್ಲಿ ಅಲ್ಲಿರುವ "ಮೊಯ್ಮೀನ್ ನನಗೆ ಬಂಧು" ಎನ್ನಲಾಗುತ್ತದೆ. ಇದು ಸಾಧಾರಣ ನೆಲೆಗಟ್ಟಿನ ನಾಗರಿಕ ಪ್ರಜ್ಞೆಯನ್ನು ಮೀರಿದ ನಿಲುವು. ಕಾಶ್ಮೀರ ನಮ್ಮದಲ್ಲ ಎಂದು ನಂಬುವುದು ಕೂಡ ಇದೇ ಸಾಲಿಗೆ ಸೇರುತ್ತದೆ. ಇಲ್ಲಿ ಕವಿತೆ ಬರಿಯ ವಿಡಂಬನೆಯ ಮೂಲಕ ಇದನ್ನು ತೋರಿಸಿಕೊಟ್ಟಿದೆಯಾದರೂ ಯಾರನ್ನೂ ಪ್ರಶ್ನಿಸುತ್ತಿಲ್ಲ.   

"ಬಾಮೀಯಾನದ ಬುದ್ಧನನ್ನು ಅವರು ಬೇಕಾದರೆ ಒಡೆಯುತ್ತಾರೆ — ಅದು ಅವರ ದೇಶ; ಅವರದೇ ಸಾಮ್ರಾಜ್ಯ. ಅವರ ಒಡೆತನದಲ್ಲಿರುವ ದೇಶದಲ್ಲಿ ಅವರು ಏನಾದರೂ ಮಾಡಿಕೊಳ್ಳುತ್ತಾರೆ. ಅದನ್ನು ಪ್ರಶ್ನಿಸುವ ಅಧಿಕಾರ ನಮಗಿಲ್ಲ" ಎನ್ನಲಾಗುತ್ತದೆ. ಆದರೆ ಬುದ್ಧ ಇಂಡಿಕ್ ಸಂಸ್ಕೃತಿಯ ಪ್ರಧಾನ ಭಾಗವೆಂಬುದನ್ನು ಮರೆಯಲಾಗುತ್ತದೆ. 

ಇಂಡ್ಯಾ ಜಾತ್ಯಾತೀತ — ಪರಿಸ್ಥಿತಿಯ ವ್ಯಂಗ್ಯದಿಂದ ರೂಪುಗೊಂಡ ಮರುವ್ಯಂಗ್ಯವಿದು. “ನಾಗರಿಕ ಹಕ್ಕು ಅಥವಾ ಪ್ರಜೆಯಾಗಿ ನನ್ನ ಹಕ್ಕು ಜಾತ್ಯಾತೀತವಾಗಿರಲಿ ಸೊತ್ತಿನ ಹಕ್ಕು ದೀನೀ ಆಗಲಿ” — ಎಂದರೆ "ನನಗೆ ಸಾಂದರ್ಭಿಕ ಜಾತ್ಯಾತೀತತೆ ಸಾಕು. ನಾಗರಿಕ ದಂಡ ಸಂಹಿತೆ ನನಗೆ ಶರೀಯತ್ ರೂಪದಲ್ಲಿ ಬೇಡ, ಆದರೆ ವೈಯಕ್ತಿಕ ಕಾನೂನು (ತಾಯಿತಂದೆಯರ ಆಸ್ತಿ ಅವರ ಮಕ್ಕಳಿಗೆ ದೊರಕುವ ವಿಚಾರವನ್ನು ಚರ್ಚಿಸುವ) ಶರೀಯತ್ ಆಗಿ ದೊರಕಲಿ." ಇಸ್ಲಾಮಿಸ್ಟ್ ರಾಜಕೀಯ ಧ್ವನಿಯನ್ನು ಪ್ರಶ್ನಿಸುವಾಗಲೂ ಇಸ್ಲಾಂ ಮತದ ಬಗೆಗಿನ ವಿಮರ್ಶೆಯೋ ಚರ್ಚೆಯೋ ಇಲ್ಲಿಲ್ಲ. ಇದೇ ಲೇಖಕನ "ಸೂಫಿ" ಕವಿತೆಯಲ್ಲಿಯೂ ಸಹ ಇದೇ ಶೈಲಿಯನ್ನು ಅಳವಡಿಸಲಾಗಿದೆ. ಸೂಫಿ ಬಾಹ್ಯ ಆಚರಣೆಗಳಲ್ಲಿರುವ ದ್ವಂದ್ವವನ್ನು ಎತ್ತಿ ತೋರಿಸುವಾಗಲೂ ಮತದ ವಿಮರ್ಶೆ ಅಲ್ಲಿಲ್ಲ ಎಂದು ಮನಗಾಣಬಹುದು. ಮತದ ಅನುಷ್ಠಾನದಿಂದ ದೊರಕಬಲ್ಲ ಮೌಲ್ಯ ನಿತ್ಯಾ ಮಾಡುವ ಸುಜೂದುಗಳಿಂದಲಾಗಿ ದೊರಕಿದೆಯೋ ಎಂದು ಸೂಫಿಯೊಬ್ಬನು ಪ್ರಶ್ನಿಸುವ ಶೈಲಿ ಅಲ್ಲಿನದಾಗಿತ್ತು.

"ಬೋಳ" ಎಂಬ ಪದ ಪ್ರಾದೇಶಿಕ ಸೊಗಡಿನ ಪ್ರಯೋಗವಾಗಿದ್ದು ವಿಡಂಬನೆಗಾಗಿ ಬಳಸಲಾಗಿದೆ. 
____________________________________________________________________________
ಕೇವಲ ಒಬ್ಬ ಸುಡಾಪೀ ನಾನು | ನನ್ನನು
ಜಿಹಾದಿಯೆಂದೇತಕೆ ಕರೆದೀರೀ | ಬೋಳ
ಸುಡಾಪಿ ಆಗಿರುವಂಥ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ | ಬೋಳ
ಸುಡಾಪಿ ಆಗಿರುವಂಥ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ ||

ಸುಡಾಪಿಯಾಗಿರುವೆ ಜಿಹಾದೀ ಅಲ್ಲ ನಾ
ಸುಡಾಪಿಯಾಗಿರುವೆ ಜಿಹಾದೀ ಅಲ್ಲ ನಾ | ಬೋಳ
ಸುಡಾಪೀ ಆಗಿರುವಂಥ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ ||

ಪಾಕಿಸ್ಥಾನದ ಹಿಂದು, ನನ್ನ ಯಾರೂ ಅಲ್ಲವೊ ಜಂತು !
ಆದರೆ ಅಲ್ಲಿರುವಂಥ ಮೊಯ್ಮೀನ್ ನನಗೆ ಬಂಧು |
ಮೊಯ್ಮೀನ್ ನನಗೆ ಬಂಧು | ಬೋಳ
ಸುಡಾಪಿ ಆಗಿರುವಂಥ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ ||

ಕಾಶಮೀರದ ಹಿಂದು, ನನ್ನ ಯಾರೂ ಅಲ್ಲವೊ ಜಂತು !
ಆದರೆ ಅಲ್ಲಿರುವಂಥ ಮೊಯ್ಮೀನ್ ನನಗೆ ಬಂಧು |
ಮೊಯ್ಮೀನ್ ನನಗೆ ಬಂಧು | ಬೋಳ
ಸುಡಾಪಿ ಆಗಿರುವಂಥ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ ||

ಬಾಮೀಯಾನದ ಬುದ್ಧನ ನಾವು ಹೊಡೆದು ಒಡೆಯುವುದಂತೂ ಸತ್ಯಾ |
ನಮ್ಮ ಸಾಮ್ರಾಜ್ಯ ನಮ್ಮ ಹುಕೂಮತ್ ನಮ್ಮೆಣಿಕೇ ಎಂದಿಗು ಸತ್ಯಾ |
ದೀನಿ ಗುಲಾಮ ಸುಡಾಪೀ ನಾನು ಜಿಹಾದಿಯೆಂದೇತಕೆ ಕರೆದೀರೀ | ಬೋಳ
ಸುಡಾಪಿ ಆಗಿರುವಂಥ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ ||

ಇದು ಜಾತ್ಯಾ-ತೀತಾ ಇಂಡ್ಯಾ | ಭಾರತವೆಂಬ ಹೆಸರನ್ನೇ  ಕೇಳಿದರಾಗದು, ಸತ್ಯಾ |
ಪ್ರಜೆಗಳ ಹಕ್ಕು ಜಾತ್ಯಾ-ತೀತಾ ಇರಲಿ ಸೊತ್ತಿನ ಹಕ್ಕು ದೀನೀ ಆಗಲಿ, ಸತ್ಯಾ |
ದೀನಿ ಗುಲಾಮ ಸುಡಾಪೀ ನಾನು ಜಿಹಾದಿಯೆಂದೇತಕೆ ಕರೆದೀರೀ | ಬೋಳ
ಸುಡಾಪಿ ಆಗಿರುವಂಥ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ | ನನ್ನನು
ಜಿಹಾದಿಯೆಂದೇತಕೆ ಕರೆದೀರೀ ||

ಕಗ್ಗಮಾಲಿಕೆ - ೭: ದ್ವೈತದೊಳದ್ವೈತದ ಕಾಣ್ಕೆ

   ಕಗ್ಗಮಾಲಿಕೆ - ೭: ದ್ವೈತದೊಳದ್ವೈತದ ಕಾಣ್ಕೆ ಪೀಠಿಕೆ: ಚಿಟಿಕೆ ಹೊಡೆಯಲು ಎರಡು ಬೆರಳುಗಳು ಬೇಕಾಗುವಂತೆ, ಲೋಕದ ವ್ಯವಹಾರದಲ್ಲಿ ದ್ವೈತವೇ ಇರುತ್ತದೆ. ಆದರೆ ಪರಮತತ್ತ್ವ...